Sunday, July 1, 2018

ಆಧಾರ್-ಪ್ಯಾನ್ ಕಾರ್ಡ್ ಜೋಡಣೆಗೆ ಗಡುವು ವಿಸ್ತರಣೆ

ಆಧಾರ್ ಮತ್ತು ಪಾನ್ ಕಾರ್ಡ್ ಜೋಡಣೆಗೆ ಕೇಂದ್ರ ಸರ್ಕಾರ ಈ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ಪರಿಷ್ಕರಿಸಿದ್ದು, ಜೂನ್ 30ಕ್ಕೆ ಕೊನೆಯಗಬೇಕಿದ್ದ ಗಡುವನ್ನು ಮುಂದಿನ ವರ್ಷ ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಿದೆ. ಈ ಹಿಂದೆ ನಾಲ್ಕು ಬಾರಿ ಅಂತಿಮ ಗಡುವನ್ನು ವಿಸ್ತರಣೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಐದನೇ ಬಾರಿಗೆ ಮತ್ತೆ ಅಂತಿಮ ಗಡುವನ್ನು ವಿಸ್ತರಿಸಿದೆ.

ಆಧಾರ್‌ನ ಸಿಂಧುತ್ವವನ್ನು ಪ್ರಶ್ನಿಸಿ ಹಾಕಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಗಿಯುವತನಕ ಆಧಾರ್ ಜೋಡಣೆಯ ಗಡುವನ್ನು ಸರ್ಕಾರ ವಿಸ್ತರಿಸಬೇಕು ಎಂದು ಸುಪ್ರೀಂ ಕೋರ್ಟು ಕೇಂದ್ರಕ್ಕೆ ಸೂಚಿಸಿತ್ತು. ಅದರಂತೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 119ರ ಅಡಿಯಲ್ಲಿ ಆಧಾರ್ ಸಂಖ್ಯೆ ಮತ್ತು ಪ್ಯಾನ್ ಕಾರ್ಡ್ ನೊಂದಿಗೆ ಜೋಡಣೆ ಮಾಡುವ ಅಂತಿಮ ಗಡುವನ್ನು 2019 ಮಾರ್ಚ್ 31ಕ್ಕೆ ವಿಸ್ತರಣೆ ಮಾಡಲಾಗಿದೆ.

ಈ ವಿಚಾರವಾಗಿ ನೆನ್ನೆ ತಡರಾತ್ರಿ ಪ್ರತಿಕ್ರಿಯೆ ನೀಡಿರುವ ಸಿಬಿಡಿಟಿ(Central Board of Direct Taxes) ಸುಪ್ರೀಂ ಕೋರ್ಟ್ ಸೂಚನೆಯಂತೆ ಅಂತಿಮ ಗಡುವವನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

ಕೃಪೆ: ನೆಟ್.

No comments:

Post a Comment