ಬೆಂಗಳೂರು: ಈ ಹಿಂದಿನ ಕಾಂಗ್ರೆಸ್ ಸರ್ಕಾರ ಶ್ರೀಮಂತರಿಗೆ ಲಭಿಸುವ ಆರೋಗ್ಯ ಸೇವೆ, ಬಡ ವರ್ಗಕ್ಕೂ ಸಿಗಬೇಕೆಂಬ ಉದ್ದೇಶದಿಂದ ಆರೋಗ್ಯ ಕರ್ನಾಟಕ ಯೋಜನೆಯನ್ನು ಅರಂಭಿಸಿತ್ತು.
ಈಗ ಈ ಹಿಂದಿನ ಸರ್ಕಾರ ಜಾರಿಗೆ ತಂಧಿದ್ದ ಆರೋಗ್ಯ ಕರ್ನಾಟಕಯನ್ನು ಈ ಬಾರಿಯ ಸಮ್ಮಿಶ್ರ ಸರ್ಕಾರ ಕೂಡ ಮುಂದುವರೆಸಿಕೊಂಡು ಹೋಗುವುದಕ್ಕೆ ನಿರ್ಧಾರ ಮಾಡಿದೆ ಎನ್ನಲಾಗಿದ್ದು, ಈ ಬಗ್ಗೆ ರಾಜ್ಯಪಾಲ ವಾಜೂಬಾಯಿವಾಲ ಅವರು ತಿಳಿಸಿದ್ದಾರೆ.
ಅವರು ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ದೇಶದಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಅಂತ ಹೇಳಿದರು.
ಏನೀದು ಆರೋಗ್ಯ ಕರ್ನಾಟಕ ಯೋಜನೆ?
ಆರೋಗ್ಯ ಸೇವೆಗಳು ತುಟ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕುಟುಂಬಕ್ಕೆ 1.5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವ ಮೂಲಕ ಸಾಮಾನ್ಯ ಜನರ ಆರೋಗ್ಯ ಭದ್ರತೆಗಾಗಿ ಯೋಜನೆ ಅನುಷ್ಠಾನಗೊಳಿಸಿದೆ. ಬಿಪಿಎಲ್ ಕಾರ್ಡದಾರರಿಗೆ ಸರ್ಕಾರಿ ಹಾಗೂ ಖಾಸಗಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ 1.5 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತವಾಗಿರಲಿದೆ. ಅಲ್ಲದೆ ಹೆಚ್ಚುವರಿಯಾಗಿ 50 ಸಾವಿರ ರೂ.ಗಳ ಚಿಕಿತ್ಸೆ ಸಿಗಲಿದೆ.
No comments:
Post a Comment