Sunday, July 8, 2018

Application invitation for Stipends

ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತಿಗಳಿಗೆ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ.

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‌ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿಟಿಪಿ ಮಾಡಿದ ಕನಿಷ್ಠ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.
18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂ.02 ಇವರಿಗೆ ಜು.21ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು -
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.


No comments:

Post a Comment