Saturday, March 30, 2019

ಐಡಿಬಿಐ ಬ್ಯಾಂಕ್ ನೇಮಕಾತಿ 120ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಐಡಿಬಿಐ ಬ್ಯಾಂಕ್ ನೇಮಕಾತಿ 120ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15.2019ರೊಳಗೆ ಸಲ್ಲಿಸಬಹುದು.
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ,ಬಿ./ಬಿ.ಟೆಕ್,ಎಂಬಿಎ /ಸಿಎ ಸಿಎಫ್ / ಸ್ನಾತಕೋತ್ತರ ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.
ವಯೋಮಿತಿ:
ಅರ್ಜಿದಾರರು ಕನಿಷ್ಟ 25 ರಿಂದ ಗರಿಷ್ಟ45ವರ್ಷ ವಯೋಮಿತಿಯನ್ನು ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
 ಏಪ್ರಿಲ್ 15,2019 ರೊಳಗೆ ಸಲ್ಲಿಸಬೇಕಿರುತ್ತದೆ.

No comments:

Post a Comment