Saturday, March 30, 2019

ಐಸಿಎಫ್ಆರ್ಇ 54 ವಿಜ್ಞಾನಿ-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ


ಇಂಡಿಯನ್ಕೌನ್ಸಿಲ್ ಆಫ್ ಫಾರೆಸ್ಟ್ ರಿಸರ್ಚ್ ಮತ್ತು ಎಜುಕೇಶನ್ ನೇಮಕಾತಿ 54ವಿಜ್ಞಾನಿ-ಬಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಐಸಿಎಫ್ಆರ್ ಅಧಿಕೃತ ವೆಬ್ಸೈಟ್ಗೆ ಹೋಗಿ ಏಪ್ರಿಲ್ 1,2019 ರಿಂದ ಮೇ 15,2019 ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ:
ಯಾವದೇ ವಿಷಯದಲ್ಲಿ ಪಿ.ಹೆಚ್ಡಿ / ಎಂ.ಟೆಕ್ / ಎಂ.ಎಸ್ಸಿ/ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮೇ 15,2019 ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,,77,500/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಏಪ್ರಿಲ್ 1,2019 ರಿಂದ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 


No comments:

Post a Comment