Saturday, March 30, 2019

ಜೆಎನ್ಯು ವಿಶ್ವವಿದ್ಯಾಲಯ ನೇಮಕಾತಿ 97 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯ ನೇಮಕಾತಿ 97 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಜೆಎನ್ಯು ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 29,2019 ರೊಳಗೆ ಸಲ್ಲಿಸಬಹುದು.
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಶೇ55%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 57,700/- ರಿಂದ 1,82,400/-ರೂ ವೇತನವನ್ನು ನೀಡಲಾಗುವುದು.

ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 29,2019 ಸಂಜೆ 5:30ರೊಳಗೆ ಸಲ್ಲಿಸಬೇಕಿರುತ್ತದೆ.


No comments:

Post a Comment