Saturday, March 30, 2019

ಹೆಚ್ಎಎಲ್ ನೇಮಕಾತಿ ಪಿಆರ್ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ


ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪಿಆರ್ಟಿ ಮತ್ತು ಟಿಜಿಟಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಹೆಚ್ಎಎಲ್ ಅಧಿಕೃತ ವೆಬ್ಸೈಟ್ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಬಿಎ ಜೊತೆಗೆ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:
ಪಿಆರ್ಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಪಿಆರ್ಟಿ- ಸೋಷಿಯಲ್ ಸ್ಟಡೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಟಿಜಿಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಹೆಚ್ಎಎಲ್ ಅಧಿಕೃತ ವೆಬ್ಸೈಟ್ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.


No comments:

Post a Comment