Wednesday, April 10, 2019

ಮೇ. 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ..!


ನವದೆಹಲಿ,.10- ಸಚಿವ ಶಿವಳ್ಳಿಯವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೂಹೂರ್ತ ನಿಗದಿಯಾಗಿದೆ.
ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದೇ ಫಲಿತಾಂಶ ಹೊರಬೀಳಲಿದೆ. .22ಕ್ಕೆ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು .29 ಕೊನೆಯ ದಿನವಾಗಿದೆ.
.30 ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 2ರವರೆಗೆ ಅವಕಾಶ ಇರಲಿದೆ. ಶಿವಳ್ಳಿ ಅವರು ಮಾರ್ಚ್ 22 ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಚಿಂಚೋಳಿ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಕಲಬುರಗಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಬಿಜೆಪಿಯ ಉಮೇದುದಾರರಾಗಿ ಸ್ಪರ್ಧಿಸಿದ್ದಾರೆಆದರೆ ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಆಯೋಗ ಪ್ರಕಟಿಸಿಲ್ಲ. ದಗೋಳದೊಂದಿಗೆ ಗೋವಾದ ಒಂದು ಮತ್ತು ತಮಿಳುನಾಡಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.


No comments:

Post a Comment