Saturday, April 13, 2019

ಎಸ್ಬಿಐ ನೇಮಕಾತಿ 8,904 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 8,904 ಕ್ಲರ್ಕ್ ಹುದ್ದೆಗಳನ್ನು
ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್ಬಿಐ ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಹುದ್ದೆಗಳಿಗೆ ಸೇರಲು ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ವಯೋಮಿತಿ:

ಏಪ್ರಿಲ್ 1,2019 ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13,075/-ರಿಂದ 31,450/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

No comments:

Post a Comment