Saturday, August 8, 2020

National Education Policy 2020 Highlights: ಹೊಸ ಶಿಕ್ಷಣ ನೀತಿಯಲ್ಲಿರುವ ಪ್ರಮುಖಾಂಶಗಳು

"ನಿಮಗಿದು ತಿಳಿದಿರಲಿ"
================

🌷 National Education Policy 2020 Highlights: ಹೊಸ ಶಿಕ್ಷಣ ನೀತಿಯಲ್ಲಿರುವ ಪ್ರಮುಖಾಂಶಗಳು
====================
ಸುಮಾರು 34 ವರ್ಷಗಳ ಬಳಿಕ ಇನ್ನು ಮುಂದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಭಾರತದಲ್ಲಿ ಜಾರಿಯಾಗಲಿದೆ. ಈಗ ಇರುವ 10+2 ಶಿಕ್ಷಣ ವ್ಯವಸ್ಥೆ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ.
===============
👉 ನೂತನ ಶಿಕ್ಷಣ ನೀತಿಯಲ್ಲಿರುವ ಪ್ರಮುಖಾಂಶಗಳು:
================
 ಇನ್ನು ಮುಂದೆ 10+2 ಶಿಕ್ಷಣ ವ್ಯವಸ್ಥೆ ಇರುವುದಿಲ್ಲ. ಇದನ್ನು 5+3+3+4 ರಂತೆ ವಿಂಗಡನೆ ಮಾಡಲಾಗಿದೆ. ಇದರರ್ಥ ಶಾಲೆಯ ಮೊದಲ ಐದು ವರ್ಷಗಳು ಅಡಿಪಾಯ ಹಂತ, 3 ರಿಂದ 5 ನೇ ತರಗತಿಯವರೆಗಿನ ಮೂರು ವರ್ಷಗಳನ್ನು ಪೂರ್ವಸಿದ್ಧತಾ ಹಂತವಾಗಿ ವಿಂಗಡಿಸಲಾಗಿದೆ. ನಂತರ ಮೂರು ವರ್ಷಗಳು ಮಧ್ಯಮ ಹಂತವಾಗಿ ವಿಂಗಡಿಸಲಾಗಿದೆ. ನಂತರದ ನಾಲ್ಕು ವರ್ಷವನ್ನು ದ್ವಿತೀಯ ಹಂತವನ್ನಾಗಿ ವಿಂಗಡಿಸಲಾಗಿದೆ. ಶಾಲೆಗಳು ಶಾಲೆಗಳು ಕಲೆ, ವಾಣಿಜ್ಯ, ವಿಜ್ಞಾನದ ಹೊಳೆಗಳ ಯಾವುದೇ ಕಟ್ಟುನಿಟ್ಟಿನ ರಚನೆಯನ್ನು ಹೊಂದಿರುವುದಿಲ್ಲ, ವಿದ್ಯಾರ್ಥಿಗಳು ತಾವು ಬಯಸುವ ಯಾವುದೇ ಕೋರ್ಸ್‌ಗಳನ್ನು ತೆಗೆದುಕೊಳ್ಳಬಹುದು.
===================
> ವಿದ್ಯಾರ್ಥಿಗಳಿಗೆ 5ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಬೇಕು.

>  ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದಲೇ ಕೋಡಿಂಗ್‌ ಪಾಠವನ್ನು ಹೇಳಿಕೊಡಬೇಕು.

>  ಸಂಶೋಧನೆ ಸಂಬಂಧ ಇನ್ನು ಮುಂದೆ ಯಾವುದೇ ಎಂಪಿಎಲ್‌ ಇರುವುದಿಲ್ಲ. 

> ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ ಮಾಡಲಾಗಿದೆ.

>  ಬೋರ್ಡ್ ಪರೀಕ್ಷೆಗಳ ಮಹತ್ವ ಕಡಿಮೆ ಮಾಡುವುದು, ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು. 

> ಮಾರ್ಕ್ಸ್ ಕಾರ್ಡ್‌ಗಳು ಕೇವಲ ಅಂಕಗಳು ಮತ್ತು ಹೇಳಿಕೆಗಳಿಗೆ ಬದಲಾಗಿ ಕೌಶಲ್ಯ ಮತ್ತು ಸಾಮರ್ಥ್ಯಗಳ ಕುರಿತು ಸಮಗ್ರ ವರದಿ ನೀಡುವುದು. 

> ಪ್ರತಿ ವಿದ್ಯಾರ್ಥಿ ಒಂದು ಕೌಶಲ್ಯವನ್ನು ಕಲಿಯಲೇಬೇಕು. 

> ವಯಸ್ಕರಿಗೆ ಆ್ಯಪ್ ,ಆನ್ ಲೈನ್, ಟಿವಿ , ಆನ್ ಲೈನ್ ಬುಕ್ ಗಳ ಮೂಲಕ ಕಲಿಕೆಗೆ ಅವಕಾಶ ನೀಡುವುದು.

> ಪ್ರಾದೇಶಿಕ ಭಾಷೆಗಳಲ್ಲಿ ಇ- ಕಂಟೆಂಟ್ ಪೂರೈಕೆ ಮಾಡುವುದು. 

> ಮಧ್ಯದಲ್ಲಿ ಕೋರ್ಸ್ ಬಿಡಲು ಬಯಸುವರಿಗೆ ಪ್ರವೇಶ ಮತ್ತು ನಿರ್ಗಮನ ಆಯ್ಕೆ ನೀಡಿದೆ. 

> ಉನ್ನತ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕರೂಪದ ಪರೀಕ್ಷೆ ನಡೆಸಲಾಗುವುದು. 

> ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಸರ್ಕಾರದಿಂದಲೇ ಶುಲ್ಕ ನಿಗದಿ ಮಾಡಲಾಗುವುದು.

No comments:

Post a Comment